Footer Logo

December 22, 2020

Karnataka Postal Circle Recruitment 2020: 2443 ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

  ADMIN       December 22, 2020

  Karnataka Postal Circle Recruitment 2020: 2443 ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ 


 ಕರ್ನಾಟಕ ಪೋಸ್ಟಲ್ ಸರ್ಕಲ್ 2443 ಗ್ರಾಮೀಣ ದಖ್ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. 

ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.   


ವಿದ್ಯಾರ್ಹತೆ: ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ 10ನೇ ತರಗತಿ  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. 



ವಯೋಮಿತಿ: ಈ ಹುದ್ದೆಗಳಿಗೆ ಡಿಸೆಂಬರ್ 21,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 


ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. 

ವೇತನ: 


ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/- ರಿಂದ 14,500/-ರೂ ವೇತನವನ್ನು ನೀಡಲಾಗುವುದು. 


ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನ ಅಥವಾ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 


ಅರ್ಜಿ ಶುಲ್ಕ: ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. 


ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಪೋಸ್ಟಲ್ ಸರ್ಕಲ್ ನ ಅಧಿಕೃತ ವೆಬ್‌ಸೈಟ್ http://www.appost.in/gdsonline/home.aspx ಗೆ ಭೇಟಿ ನೀಡಿ. 


ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


Important Link:


Official Notification: click here

Apply Online :click here





logoblog

Thanks for reading Karnataka Postal Circle Recruitment 2020: 2443 ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Previous
« Prev Post

No comments:

Post a Comment

Popular Posts

Followers