545 ಸಿವಿಲ್ ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟ: ಸಂಪೂರ್ಣ ಮಾಹಿತಿ ಇಲ್ಲಿದೆ..
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂಧಗಳ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ, ಬೆಂಗಳೂರು ಇವರಿಂದ ನೇಮಕಾತಿ ಜರೂರು ಆದೇಶವು ಹೊರಬಿದ್ದಿದೆ. ಅಧಿಕೃತ ಅಧಿಸೂಚನೆಯು ಇಲಾಖೆಯ ಅಫೀಶಿಯಲ್ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲೇ ಅಪ್‌ಲೋಡ್ ಆಗಲಿದೆ.
CIVIL PSI CALL LETTER:
✍🏻🗒️✍🏻🗒️✍🏻🗒️✍🏻🗒️✍🏻
♣️ 03-10-2021 ರಂದು ನಡೆಯಲಿರುವ 545 Civil PSI ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ (Call Letter) ಇದೀಗ ಇಲಾಖೆಯ ಅಧಿಕೃತ ಅಂತರ್ಜಾಲದಲ್ಲಿ ಪ್ರಕಟಗೊಂಡಿದೆ.!!
♣️ Call Letter Download ಮಾಡಿಕೊಳ್ಳಲು ಇಲ್ಲಿದೆ ಲಿಂಕ್:
ಶುಲ್ಕ ವಿವರ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.500.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.500.
- ಎಸ್‌ಸಿ / ಎಸ್‌ಟಿ / ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250.
ಶುಲ್ಕವನ್ನು ಅಧಿಕೃತ ಬ್ಯಾಂಕ್ ಶಾಖೆಗಳ / ಅಂಚೆ ಕಛೇರಿಯ ವೇಳೆ ಪಾವತಿಸಬೇಕು.
ವೇತನ ಶ್ರೇಣಿ: ರೂ.37000-70850 ವರೆಗೆ.
ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.
ವಯೋಮಿತಿ ಅರ್ಹತೆ:
- ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
- ಎಸ್‌ಸಿ / ಎಸ್‌ಟಿ / ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
- ನಿಗದಿತ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ www.recruitment.ksp.gov.in ಗೆ ಭೇಟಿ ನೀಡಿ.
- 2021ನೇ ಸಾಲಿನ PSI ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಹೊಸ ಪೇಜ್ ಓಪನ್ ಆಗುತ್ತದೆ. ಅದರಲ್ಲಿ 'My Application' ಎಂಬಲ್ಲಿ ಕ್ಲಿಕ್ ಮಾಡಿ.
- ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಪೂರ್ಣಗೊಳಿಸಿ.
- ನಂತರ ಅರ್ಜಿ ಶುಲ್ಕ ಪಾವತಿಗೆ ಚಲನ್ ಜೆನೆರೇಟ್ ಆಗುತ್ತದೆ. ಪ್ರಿಂಟ್ ತೆಗೆದುಕೊಳ್ಳಿ.
- ಮುಂದಿನ ರೆಫರೆನ್ಸ್‌ಗಾಗಿ ಆನ್‌ಲೈನ್ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22-01-2021 ಬೆಳಿಗ್ಗೆ 10-00 ಗಂಟೆ ವರೆಗೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 22-02-2021 ಸಂಜೆ 06-00 ಗಂಟೆವರೆಗೆ.
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 24-02-2021
ಅರ್ಜಿ ಸಲ್ಲಿಸಲು ವೆಬ್‌ಸೈಟ್ ವಿಳಾಸ : click here
official notification: click here
No comments:
Post a Comment