Indian Army Recruitment 2021: ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಸೇನೆಯಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ಏಪ್ರಿಲ್ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ: ಮೆಟ್ರಿಕ್ಯುಲೇಶನ್/ತತ್ಮಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ: ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 4.2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
No comments:
Post a Comment