Breaking

Search This Blog

Thursday, March 18, 2021

Vijayapur District Child Labour Society Recruitment 2021: ನಿರ್ದೇಶಕ, ಗುಮಾಸ್ತ, ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

 Vijayapur District Child Labour Society Recruitment 2021: ನಿರ್ದೇಶಕ, ಗುಮಾಸ್ತ, ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ 


 Indian Army Recruitment 2021:ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ರಾಜ್ಯ ಬಾಲಕಾರ್ಮಿಕ ಯೋಜನೆ ಅಡಿಯಲ್ಲಿ ಗೌರವ ಧನದ ಆಧಾರದ ಮೇಲೆ ವಿಜಯಪುರ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ 3 ಯೋಜನಾ ನಿರ್ದೇಶಕರು, ಗುಮಾಸ್ತ ಮತ್ತು ಕಛೇರಿ ಜವಾನರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. 

ಆಸಕ್ತರು ಏಪ್ರಿಲ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.   

ವಿದ್ಯಾರ್ಹತೆ: ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ/ಎಂ.ಎಸ್‌.ಡಬ್ಲ್ಯೂ/ಅಭಿವೃದ್ಧಿ ಅಧ್ಯಯನ/ಲಾಭರಹಿತ ಸಂಸ್ಥೆಗಳ ನಿರ್ವಹಣಾಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಕಂಪ್ಯೂಟರ್ ಜ್ಞಾನ, ಬಿ.ಕಾಂ ಪದವಿ ಮತ್ತು ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಹತೆಯನ್ನ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ವಯೋಮಿತಿ: ಹುದ್ದೆಗಳಿಗನುಸಾರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. 

ವೇತನ: ಯೋಜನಾ ನಿರ್ದೇಶಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,965/-ರೂ, ಗುಮಾಸ್ತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,310/-ರೂ ಮತ್ತು ಕಛೇರಿ ಜವಾನರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,648/-ರೂ ವೇತನವನ್ನು ನೀಡಲಾಗುವುದು. 

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಕಂಪ್ಯೂಟರ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಕೆ: 

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://vijayapura.nic.in/en/ ಗೆ ಭೇಟಿ ನೀಡಿ. 

ಅಲ್ಲಿ ನೀಡಲಾಗಿರುವ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಗೆಜೆಟೆಡ್ ಅಧಿಕಾರಿಗಳಿಂದ ಧೃಡೀಕೃತ ಎಲ್ಲಾ ದಾಖಲಾತಿಗಳೊಂದಿಗೆ ಖುದ್ದಾಗಿ ಅರ್ಜಿಯನ್ನು ಜಿಲ್ಲಾ ಬಾಲಕಾರ್ಮಿಕ ಯೋಜನಾ ಕಛೇರಿ, 

ಕಾರ್ಮಿಕ ಇಲಾಖೆ ಅಲ್ಲಾಪುರ ಓಣಿ ಸಿಂದಗಿ ನಾಕಾ, ವಿಜಯಪುರ ಕಚೇರಿಗೆ ಏಪ್ರಿಲ್ 12,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


No comments:

Post a Comment

Translate

Popular Posts

Followers

Contact Form

Name

Email *

Message *