Footer Logo

October 2, 2021

1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಧಿಕೃತ ನೋಟಿಫಿಕೇಶನ್‌ ಬಿಡುಗಡೆ: ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.

  ADMIN       October 2, 2021

 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಧಿಕೃತ ನೋಟಿಫಿಕೇಶನ್‌ ಬಿಡುಗಡೆ: ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.




ವಿದ್ಯಾರ್ಹತೆ:

  • ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಶೇಕಡ.55 ಅಂಕಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇಕಡ.50 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು.
  • NET, KSET ಪಾಸ್‌ ಮಾಡಿರಬೇಕು.
  • ಪಿಹೆಚ್‌ಡಿ ಪದವಿ / ಎಂಫಿಲ್ ಪದವಿ ಪಡೆದವರಿಗೆ ಎನ್‌ಇಟಿ, ಎಸ್‌ಎಲ್‌ಇಟಿ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ.


ವಯೋಮಿತಿ ಅರ್ಹತೆಗಳು:

  • ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 22 ವರ್ಷಗಳು ತುಂಬಿರಬೇಕು. ಹಾಗೂ ಕೆಳಕಂಡ ಗರಿಷ್ಠ ವಯೋಮಿತಿಗಳನ್ನು ವರ್ಗಾವಾರು ನಿಗದಿಪಡಿಸಿದೆ.
  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ : 40 ವರ್ಷಗಳು
  • ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ : 43 ವರ್ಷಗಳು
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ : 45 ವರ್ಷಗಳು


ಪರೀಕ್ಷೆ ಶುಲ್ಕ ಎಷ್ಟು?

  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ : ರೂ.2000
  • ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ : ರೂ.2000
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ : ರೂ.1000
  • ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ನೀಡಲಾಗಿದೆ.


ಶುಲ್ಕ ಪಾವತಿಸುವ ವಿಧಾನ : 

  • ಶುಲ್ಕವನ್ನು ಕಂಪ್ಯೂಟರ್ಸ್ ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿಸಬೇಕು. 
  • ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದ್ದಲ್ಲಿ, ಒಂದೇ ಅರ್ಜಿಯಲ್ಲಿ ಸಲ್ಲಿಸಬೇಕು. 
  • ಆದರೆ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಶುಲ್ಕವನ್ನು ಪಾವತಿಸಬೇಕು.


ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿಯನ್ನು ಈ ಕೆಳಕಂಡ ವಿಷಯಗಳಿಗೆ ನಡೆಸಲಾಗುತ್ತದೆ.

ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಕಾನೂನು, ಸಮಾಜ ಕಾರ್ಯ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೈವಿಕ ರಸಾಯನ ಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್‌, ಗಣಕವಿಜ್ಞಾನ, ಸಂಖ್ಯಾ ಶಾಸ್ತ್ರ, ಫ್ಯಾಶನ್‌ ಟೆಕ್ನಾಲಜಿ.



ವೇತನ / ನೇಮಕ ವಿಧಾನ:

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಯುಜಿಸಿ ವೇತನ ಶ್ರೇಣಿ ರೂ.57700-182,400 ವರೆಗೆ ಇರುತ್ತದೆ.


ನೇಮಕಾತಿ ವಿಧಾನ:


ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಮೆರಿಟ್‌ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೀಸಲಾತಿ (ನೇರ ಮತ್ತು ಸಮತಳ) ಮತ್ತು ರೋಸ್ಟರ್ ಬಿಮದುಗಳನ್ವಯ ಆಯ್ಕೆ ಮಾಡಿ, ಅಂತಿಮ ಆಯ್ಕೆಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.


ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 


2021 ರ ಡಿಸೆಂಬರ್ ಮಾಹೆಯ 3ನೇ ಅಥವಾ 4ನೇ ವಾರದಲ್ಲಿ ನಡೆಸುವ ಸಾಧ್ಯತೆ ಇದೆ.


ಅರ್ಜಿ ಸಲ್ಲಿಕೆ ಹೇಗೆ?


  • ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಗೆ ಭೇಟಿ ನೀಡಿ.
  • ಓಪನ್‌ ಆದ ಪೇಜ್‌ನಲ್ಲಿ 'Assistant Professors Recruitment -2021' ಎಂದಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಓಪನ್ ಆಗುವ ಪೇಜ್‌ನಲ್ಲಿ ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಪೂರ್ಣಗೊಳಿಸಿ.


ಪ್ರಮುಖ ದಿನಾಂಕಗಳು:


  • ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07-10-2021
  • ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 06-11-2021 ರ ರಾತ್ರಿ 11-59 ಗಂಟೆವರೆಗೆ.
  • ಇ-ಪೋಸ್ಟ್‌ ಆಫೀಸ್‌ನಲ್ಲಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 10-11-2021


 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಧಿಕೃತ ನೋಟಿಫಿಕೇಶನ್‌ ಬಿಡುಗಡೆ: ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.



logoblog

Thanks for reading 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಧಿಕೃತ ನೋಟಿಫಿಕೇಶನ್‌ ಬಿಡುಗಡೆ: ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.

Previous
« Prev Post

No comments:

Post a Comment

Popular Posts

Followers