NCR RRC Job Notification 2023: ಐಟಿಐ ಪಾಸ್ ಮಾಡಿದವರಿಗೆ ಭರ್ಜರಿ ಉದ್ಯೋಗಾವಕಾಶ. ನಾರ್ಥ್ ಸೆಂಟ್ರಲ್ ರೈಲ್ವೆಯಲ್ಲಿ 1697 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸವಿವರ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಉತ್ತರ ಕೇಂದ್ರ ರೈಲ್ವೆಯ ಡಿವಿಷನ್‌ವಾರು ಹುದ್ದೆಗಳ ವಿವರ
ಪ್ರಯಾಗ್‌ರಾಜ್ ಡಿವಿಷನ್ - ಮೆಕ್ಯಾನಿಕಲ್ ವಿಭಾಗ : 364
ಪ್ರಯಾಗ್‌ರಾಜ್ ಡಿವಿಷನ್ - ಇಲೆಕ್ಟ್ರಿಕಲ್ ವಿಭಾಗ : 339
ಜಾನ್ಸಿ ಡಿವಿಷನ್ : 528
ವರ್ಕ್‌ಶಾಪ್ ಜಾನ್ಸಿ ಡಿವಿಷನ್ : 170
ಆಗ್ರ ಡಿವಿಷನ್ : 296
ಶೈಕ್ಷಣಿಕ ಅರ್ಹತೆಗಳು :
ಮೆಟ್ರಿಕ್ಯೂಲೇಷನ್ ಜತೆಗೆ ಹುದ್ದೆಗಳಿಗೆ ಅನುಗುಣವಾಗಿ ಮೆಕ್ಯಾನಿಕಲ್ / ಇಲೆಕ್ಟ್ರೀಷಿಯನ್/ ಇತರೆ ಟ್ರೇಡ್‌ಗಳಲ್ಲಿ ಐಟಿಐ ಪಾಸ್ ಮಾಡಿರಬೇಕು.
ವಯೋಮಿತಿ ಅರ್ಹತೆಗಳು
ಅಪ್ಲಿಕೇಶನ್ ಸಲ್ಲಿಸಲು ಬಯಸುವವರು ಕನಿಷ್ಠ 15 ವರ್ಷ ಪೂರೈಸಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.
ಅಪ್ಲಿಕೇಶನ್ ಶುಲ್ಕ ವಿವರ
ಸಾಮಾನ್ಯ ಕೆಟಗರಿ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.100.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪಿಹೆಚ್ /ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ ವಿಳಾಸ www.rrcpryj.org ಕ್ಕೆ ಭೇಟಿ ನೀಡಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಎಸ್‌ಎಸ್‌ಎಲ್‌ಸಿ, ಐಟಿಐ ಪಾಸ್ ಸರ್ಟಿಫಿಕೇಟ್, ಆಧಾರ್ ಕಾರ್ಡ್, ಜನ್ಮ ದಿನಾಂಕ ಮಾಹಿತಿ ಪ್ರಮಾಣ ಪತ್ರಗಳು, ಸಹಿ ಸ್ಕ್ಯಾನ್ ಕಾಪಿ ಅಪ್‌ಲೋಡ್ ಮಾಡಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಎಸ್‌ಎಸ್‌ಎಲ್‌ಸಿ ಶೇಕಡ.50 ಅಂಕಗಳು ಮತ್ತು ಐಟಿಐ ಟ್ರೇಡ್‌ನ ಶೇಕಡ.50 ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅಪ್ರೆಂಟಿಸ್ ಹುದ್ದೆಯ ಅವಧಿ: 1 ವರ್ಷ.
ಅಪ್ರೆಂಟಿಸ್ ಅಭ್ಯರ್ಥಿಗಳಿಗೆ ಸ್ಟೈಫಂಡ್ : ಮಾಸಿಕ ರೂ.8000-9000.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 15-11-2023
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14-12-2023 ರ ರಾತ್ರಿ 11-59 ಗಂಟೆವರೆಗೆ.
No comments:
Post a Comment