ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಅಧಿಸೂಚನೆ 2024
ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ
ಇಲಾಖೆ ಹೆಸರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಹುದ್ದೆಗಳ ಹೆಸರು: ಫೆಲೋ (ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್)
ಒಟ್ಟು ಹುದ್ದೆಗಳು 51
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾಜಿಕ ವಿಜ್ಞಾನಗಳಾದ ಸಮಾಜಶಾಸ್ತ್ರ ಅಥವಾ ಅರ್ಥಶಾಸ್ತ್ರ ಅಥವಾ ಗ್ರಾಮೀಣಾಭಿವೃದ್ಧಿ ಅಥವಾ ಸಮಾಜ ಕಾರ್ಯ ಅಥವಾ ಸಾರ್ವಜನಿಕ ನೀತಿ ವಿಷಯಗಳಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಕನ್ನಡ ಭಾಷಾಜ್ಞಾನ ಕಡ್ಡಾಯ. 1-2 ವರ್ಷಗಳ ಕ್ಷೇತ್ರ ಅನುಭವ ಹೊಂದಿರುವ ಪದವೀಧರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಯಾಣ ಭತ್ಯೆ ಸೇರಿ ತಿಂಗಳಿಗೆ ರೂ. 61,500 ನೀಡಲಾಗುವುದು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಫೆಲೋಗಳನ್ನು ಅರ್ಹತೆಯ ಆಧಾರದ ಮೇಲೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 22 ಜನವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 05 ಫೆಬ್ರವರಿ 2024
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
No comments:
Post a Comment