Footer Logo

February 3, 2024

RRC Southern Railway Recruitment 2024 : ರೈಲ್ವೆ ಇಲಾಖೆಯಲ್ಲಿ 2860 ಬೃಹತ್ ನೇಮಕಾತಿ 2024

  ADMIN       February 3, 2024

 RRC Southern Railway Recruitment 2024 : ರೈಲ್ವೆ ಇಲಾಖೆಯಲ್ಲಿ 2860 ಬೃಹತ್ ನೇಮಕಾತಿ 2024




ದಕ್ಷಿಣ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.


ಇಲಾಖೆ ಹೆಸರು: ದಕ್ಷಿಣ ರೈಲ್ವೆ – RRC Southern Railway

ಹುದ್ದೆಗಳ ಹೆಸರು: ಅಪ್ಪ್ರೆಂಟಿಸ್ 

ಒಟ್ಟು ಹುದ್ದೆಗಳು 2860

ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 


ವಿದ್ಯಾರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.



ವಯೋಮಿತಿ:

ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಫ್ರೆಶರ್ಸ್ ಅಭ್ಯರ್ಥಿಗಳಿಗೆ ಗರಿಷ್ಠ 22 ವರ್ಷ, ಎಕ್ಸ್- ಐಟಿಐ, ಎಂ.ಎಲ್.ಟಿ ಅಭ್ಯರ್ಥಿಗಳಿಗೆ ಗರಿಷ್ಠ 24 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ :

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ

• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ


ಅರ್ಜಿ ಶುಲ್ಕ:

ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ

ಉಳಿದ ಅಭ್ಯರ್ಥಿಗಳಿಗೆ – ರೂ. 100


ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.


ಆಯ್ಕೆ ವಿಧಾನ:

ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ


ಪ್ರಮುಖ ದಿನಾಂಕಗಳು

  • ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 29 ಜನವರಿ 2024
  • ಅರ್ಜಿ ಸಲಿಸಲು ಕೊನೆಯ ದಿನಾಂಕ – 28 ಫೆಬ್ರವರಿ 2024


ಪ್ರಮುಖ ಲಿಂಕುಗಳು 

ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

logoblog

Thanks for reading RRC Southern Railway Recruitment 2024 : ರೈಲ್ವೆ ಇಲಾಖೆಯಲ್ಲಿ 2860 ಬೃಹತ್ ನೇಮಕಾತಿ 2024

Previous
« Prev Post

No comments:

Post a Comment

Popular Posts

Followers