ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ನೇಮಕಾತಿ 2024 ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 28
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್
ಹುದ್ದೆಗಳ ವಿವರ
ಸೀನಿಯರ್ ಪ್ರೋಗ್ರಾಮರ್ 2
ಜೂನಿಯರ್ ಪ್ರೋಗ್ರಾಮರ್ 2
ಜೂನಿಯರ್ ಕನ್ಸೋಲ್ ಆಪರೇಟರ್ 4
ಕಂಪ್ಯೂಟರ್ ಆಪರೇಟರ್ 4
ಕಿರಿಯ ಸಹಾಯಕರು 8
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು 5
ವಿದ್ಯಾರ್ಹತೆ:
ಸೀನಿಯರ್ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್, ಜೂನಿಯರ್ ಕನ್ಸೋಲ್ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಸೈನ್ಸ್/ ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.
ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಅಪ್ಲಿಕೇಷನ್ (ಬಿಸಿಎ) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಎಸ್ಸಿ ಪದವಿ ಹೊಂದಿರಬೇಕು.
ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಕಾನೂನು ಪದವಿ ಹೊಂದಿರಬೇಕು. ಗಣಕಯಂತ್ರ ಜ್ಞಾನ ಹೊಂದಿರತಕ್ಕದ್ದು.
ಕಿರಿಯ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರತಕ್ಕದ್ದು.
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಹಿರಿಯ ದರ್ಜೆಯ ಬೆರಳಚ್ಚುಗಾರರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನಶ್ರೇಣಿ:
ಸೀನಿಯರ್ ಪ್ರೋಗ್ರಾಮರ್ 52650-97100
ಜೂನಿಯರ್ ಪ್ರೋಗ್ರಾಮರ್ 43100-83900
ಜೂನಿಯರ್ ಕನ್ಸೋಲ್ ಆಪರೇಟರ್ 37900-70850
ಕಂಪ್ಯೂಟರ್ ಆಪರೇಟರ್ 30350-58250
ಸಹಾಯಕರು 30350-58250
ಕಿರಿಯ ಸಹಾಯಕರು 21400-42000
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು 21400-42000
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
ಎಸ್ಸಿ, ಎಸ್ಟಿ, ಪ್ರ1, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 500
ವಿಕಲಚೇತನ ಅಭ್ಯರ್ಥಿಗಳು – ರೂ. 250
(ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬೇಕು.)
ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 24 ಮಾರ್ಚ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 23 ಏಪ್ರಿಲ್ 2024
No comments:
Post a Comment