2500 ಹುದ್ದೆಗಳಿಗೆ ಅರ್ಜಿ ಅಹ್ವಾನ – WCD Karnataka Recruitment 2025 | complete Details
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆ 2025
WCD Karnataka Recruitment 2025 – Apply Online for 2500 Anganwadi Worker & Helper Posts ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಿಕ್ಕಮಗಳೂರು ಜಿಲ್ಲೆ ಕಲಬುರಗಿ, ಬಾಗಲಕೋಟೆ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
WCD Karnataka Recruitment 2025
ಇಲಾಖೆ ಹೆಸರು-ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಹುದ್ದೆಗಳ ಹೆಸರು -ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು
ಒಟ್ಟು ಹುದ್ದೆಗಳು -2500
ಅರ್ಜಿ ಸಲ್ಲಿಸುವ ಬಗೆ -ಆನ್ಲೈನ್ (Online)
ಉದ್ಯೋಗ ಸ್ಥಳ -ಕರ್ನಾಟಕ
ಹುದ್ದೆಗಳ ವಿವರ:
– ಅಂಗನವಾಡಿ ಕಾರ್ಯಕರ್ತೆ : 1500 ಹುದ್ದೆಗಳು
– ಅಂಗನವಾಡಿ ಸಹಾಯಕಿ : 1000 ಹುದ್ದೆಗಳು
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
(ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.)
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ಗೌರವ ಧನ :
ಅಂಗನವಾಡಿ ಕಾರ್ಯಕರ್ತೆ :ರೂ.10,000/-
ಅಂಗನವಾಡಿ ಸಹಾಯಕಿ : ರೂ.5,000/-
WCD Karnataka Recruitment 2025 ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10 ಮಾರ್ಚ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 4 ಏಪ್ರಿಲ್ 2025
WCD Karnataka Recruitment 2025 ಪ್ರಮುಖ ಲಿಂಕುಗಳು :
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
No comments:
Post a Comment